Menu

ಕುದುರೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಅರೆಸ್ಟ್‌

ನಾಗ್ಪುರದಲ್ಲಿರುವ ಹಾರ್ಸ್ ರೈಡಿಂಗ್ ಅಕಾಡೆಮಿಯಲ್ಲಿ ಕುದುರೆಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಚೋಟ್ಯಾ ಸುಂದರ್ ಖೋಬ್ರಗಡೆ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು ಮೇ 17 ರಂದು ಗಿಟ್ಟಿಖಾದನ್ ಪ್ರದೇಶದಲ್ಲಿರುವ ಜಿಲ್ಲಾ ಹಾರ್ಸ್‌ ರೈಡಿಂಗ್‌ ಅಕಾಡೆಮಿ ಆವರಣಕ್ಕೆ ರಾತ್ರಿ ವೇಳೆ ಅತಿಕ್ರಮವಾಗಿ ಪ್ರವೇಶಿಸಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯವನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಅಕಾಡೆಮಿಯ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದರು.

ಆರೋಪಿಯ ಹೀನಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿ ವಿರುದ್ಧ ಅಕಾಡೆಮಿಯ ಸಿಬ್ಬಂದಿ ದೂರು ದಾಖಲಿಸಿದ್ದು, ಆತನನ್ನು ಪೊಲೀಸರು ಬಂಧಿಸಿ ದ್ದಾರೆ. ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *