Menu

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮೆಜೆಸ್ಟಿಕ್‌ ನಮ್ಮ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆ ಹೋಗುವ ಟ್ರ್ಯಾಕ್‌ಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆಗೆ ಮುಂದಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದರು.

ವ್ಯಕ್ತಿ ಟ್ರ್ಯಾಕ್‌ಗೆ ಹಾರಿದ ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್‌ ಬಟನ್‌ ಒತ್ತಿ ರೈಲು ನಿಲ್ಲಿಸಿದ್ದಾರೆ. ಗಾಯಗೊಂಡಿದ್ದ ಆತನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ಬಿಎಂಅರ್‌ಸಿಎಲ್‌ ಭದ್ರತಾ ಮುಖ್ಯಸ್ಥ ಸೆಲ್ವಂ ತಿಳಿಸಿದ್ದಾರೆ.

ರೈಲು ಏಕಾಏಕಿ ನಿಂತಿದ್ದರಿಂದ ನಾವೆಲ್ಲ ಹೊರಬಂದು ನೋಡಿದೆವು. ರೈಲಿನ ಕೆಳಗೆ ಬಿದ್ದಿದ್ದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿರಿಗೆ ತೊಂದರೆ ಆಗದಂತೆ ಬಿಎಂಆರ್‌ಸಿಎಲ್‌ ಈ ವೇಳೆ ನಾಲ್ಕು ಟ್ರಿಪ್‌ಗಳ ಶಾರ್ಟ್‌ ಲೂಪ್‌ ರೈಲುಗಳನ್ನು ಓಡಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಯಿತು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

Related Posts

Leave a Reply

Your email address will not be published. Required fields are marked *