Menu

ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು ಗ್ರಾಮದ ರತ್ನಾಕರ್ ಎಂಬವನು ನಾಡಬಂದೂಕಿನಿಂದ ಮೂವರನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರತ್ನಾಕರ್ ಹೆಂಡತಿ ಬಿಟ್ಟು ಹೋಗಿದ್ದರಿಂದ ಮನನೊಂದಿದ್ದ. ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಿರುವುದಾಗಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ ಮನೆಗೆ ತೆರಳಿ ಅತ್ತೆ, ನಾದಿನಿ ಹಾಗೂ ಮಗಳನ್ನು ಹತ್ಯೆ ಮಾಡಿದ್ದಾನೆ.

ಹತ್ಯೆಯ ಬಳಿಕ ಸೆಲ್ಫಿ ವೀಡಿಯೊ ಮಾಡಿ ನೋವನ್ನು ತೋಡಿಕೊಂಡಿದ್ದಾನೆ. ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಶಾಲೆಯಲ್ಲಿ ಮಗಳಿಗೆ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ಹೇಳಿದ್ದಾನೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *