Menu

ಕೆಂಗೇರಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ರೈಲು ಸಂಚಾರ ವ್ಯತ್ಯಯ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತು. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ ರೈಲುಗಳು ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ.

ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಆತ್ಮಹತ್ಯೆ ಮಾಡಿಕೊಂಡವರು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಶಾಂತನಗೌಡ ಮೃತದೇಹವನ್ನು ರಾಜರಾಜೇಶ್ವರಿನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಬಿಎಂಆರ್​ಸಿಎಲ್ ಎಕ್ಸ್​ ಸಂದೇಶದಲ್ಲಿ ಹೇಳಿದೆ.ಈ ದುರಂತದಿಂದಾಗಿ ಸದ್ಯ ಚಲ್ಲಘಟ್ಟ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಪಂತರಪಾಳ್ಯ, ಕೆಂಗೇರಿ ನಿಲ್ದಾಣಗಳಲ್ಲಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ರೈಲು ಸಂಚಾರ ಎಂದಿನಂತಿದೆ.’

ಅಕ್ಟೋಬರ್​​ನಲ್ಲಿ ವಿಧಾನಸೌಧದ ಡಿ ಗ್ರೂಪ್ ನೌಕರ ವೀರೇಶ್ (35)​​ ಎಂಬವರು ಮೆಜೆಸ್ಟಿಕ್​​ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿತ್ತು.

Related Posts

Leave a Reply

Your email address will not be published. Required fields are marked *