ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆಯಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದಾರೆ.
ಮಂದಗೆರೆ ರಾಜೇಗೌಡ (75) ರೈಲಿಗೆ ಸಿಲುಕಿ ಮೃತಪಟ್ಟವರು. ರೈಲು ಹಳಿ ದಾಟುವಾಗ ಮೈಸೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮೃತ ರಾಜೇಗೌಡ ದೇಹದ ಅಂಗಾಂಗಗಳು ಛಿದ್ರಗೊಂಡಿವೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.