Menu

ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು.

ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಸಿಗಂದೂರು ಪ್ರವಾಸಕ್ಕೆ ಬಂದಿದ್ದರು. ಚೌಡೇಶ್ವರಿ ದೇವಿಯ ದರ್ಶನ ಮುಗಿಸಿ ಸೇತುವೆ ವೀಕ್ಷಣೆ ಮಾಡಿ ಈಜಲು ತೆರಳಿದಾಗ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ನದಿಯಿಂದ ಮೃತದೇಹ ಹೊರತೆಗೆದಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಳಕಾಲ್ಮೂರಿನಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ

ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ಬುಧವಾರ ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೋ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿದ್ದಾರೆ.
ಬಳ್ಳಾರಿಯ ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4), ಪರುಶುರಾಮ (1.5) ಎಂದು ಮೃತಪಟ್ಟವರು. ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Posts

Leave a Reply

Your email address will not be published. Required fields are marked *