ಮೈಸೂರಿನ ಬಿ.ಎಂ. ಹ್ಯಾಬಿಟೇಟ್ ಮಾಲ್‌ನಲ್ಲಿ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಣಸೂರು ತಾಲೂಕಿನ ಎಲೆಕ್ಟ್ರಿಷಿಯನ್ ಸುನೀಲ್ (35) ಸ್ಥಳದಲ್ಲೇ ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ಚಂದ್ರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡವರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಯಲಕ್ಷ್ಮಿಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಯಲಕ್ಷ್ಮಿಪುರಂನಲ್ಲಿರುವ ಬಿ.ಎಂ. ಹ್ಯಾಬಿಟೇಟ್ ಮಾಲ್ ಕಟ್ಟಡದ ನಾಲ್ಕನೇ ಹಂತಸ್ತಿನಲ್ಲಿ ಬೋರ್ಡ್ ತೆರವು ಮಾಡುವ ಕೆಲಸ ಮಾಡುತ್ತಿದ್ದಾಗ ಸುನೀಲ್, ಕಟ್ಟಡದ ಮೇಲೆ ಅಳವಡಿಸಿದ್ದ ಪಿಒಪಿ ಮೇಲೆ ಕಾಲಿಟ್ಟಾಗ ಕುಸಿದಿದೆ. ಆಗ ಸುನೀಲ್ ರಾಡ್‌ನ ಸಹಾಯದಿಂದ ನೇತಾಡುತ್ತಿದ್ದು, ಸುನೀಲ್ ರಕ್ಷಣೆಗೆ ಮುಂದಾದ ಚಂದ್ರು ಕೂಡ ಪಿಒಪಿ ಮೇಲೆ ಕಾಲಿಟ್ಟಿದ್ದರಿಂದ ನಿಯಂತ್ರಣ ಕಳೆದುಕೊಂಡು ಇಬ್ಬರು ಕೆಳಗೆ ಬಿದ್ದಿದ್ದಾರೆ.
ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೆ ಯತ್ನ
ವಿಜಯಪುರದಲ್ಲಿ ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಪ್ರಿಯಕರನ ಜೊತೆ ಸೇರಿ ಗಂಡ ಭೀರಪ್ಪ ಪೂಜಾರಿಯನ್ನು ಸುಮಂದಾ ಎಂಬಾಕೆ ಕತ್ತು ಹಿಚುಕಿ ಕೊಲೆ ಮಾಡಲು ಯತ್ನಿಸಿದ್ದಾಳೆ.
ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದ ಮನೆಯಲ್ಲಿ ರಾತ್ರಿ ಮಲಗಿದ್ದಾಗ ಕತ್ತು ಹಿಸುದ್ದು, ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಬೀರಪ್ಪ ಮಾಯಪ್ಪ ಪೂಜಾರಿ ಮತ್ತು ಸುನಂದಾಗೆ ಇಬ್ಬರು ಮಕ್ಕಳಿದ್ದು, ಸುನಂದಾ ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.
ಬೀರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಭೀರಪ್ಪ ನೀಡಿದ್ದ ದೂರಿನಂತೆ ಸುನಂದಾಳನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.