Tuesday, February 10, 2026
Menu

ಮಳವಳ್ಳಿಯ ಮನೆ ಜಗುಲಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯದ ಮಳವಳ್ಳಿ ತಾಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆ ಜಗುಲಿಯ ಮೇಲೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.

ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಅನುಮಾನಾಸ್ಪದವಾಗಿ ಮೃತಪಟ್ಟವರು, ಇವರು ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದರು. ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು, ಕತ್ತು ಬಿಗಿದಿರುವಂತೆ ಕಂಡು ಬಂದಿದೆ. ಮೃತದೇಹ ಬಿದ್ದಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಬಟ್ಟೆಗಳು ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ದುಷ್ಕರ್ಮಿಗಳು ಬೇರೆ ಕಡೆ ಕೊಲೆ ಮಾಡಿ, ಶವವನ್ನು ತಂದು ಮನೆಯ ಜಗುಲಿಗೆ ಎಸೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಬನ್ನೂರಿನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ ಮಂಜು, ಪತ್ನಿ ಮತ್ತು ಮಕ್ಕಳೊಂದಿಗೆ ಅಲ್ಲಿಯೇ ವಾಸವಿದ್ದರು. ಹುಲ್ಲೇಗಾಲ ಗ್ರಾಮದಲ್ಲಿ ನಡೆದ ಸಂಬಂಧಿಕರ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದರು. ಸಮಾರಂಭ ಮುಗಿದ ನಂತರ ವಾಪಸ್ ಮನೆಗೆ ಬಾರದಿದ್ದಾಗ ಆತಂಕಗೊಂಡ ಪತ್ನಿ ಹುಡುಕಾಟ ನಡೆಸಿದ್ದರು. ಮರುದಿನ ಬೆಳಿಗ್ಗೆ ಹುಟ್ಟೂರಿನ ಮನೆಯ ಜಗುಲಿಯ ಮೇಲೆ ಮಂಜು ಶವವಾಗಿ ಪತ್ತೆಯಾಗಿದ್ದಾರೆ.

ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿದ್ದು, ಮಂಜು ಅವರ ಸಹೋದರ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳಕ್ಕೆ ಮಳವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. , ಮರಣೋತ್ತರ ಪರೀಕ್ಷೆಯ ಬಳಿಕ ಪ್ರಕರಣದ ಬಗ್ಗೆ ನಿಖರ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *