ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುಬ್ರಾಯಗೌಡ (65) ಮೃತಪಟ್ಟವರು. ಕಳೆದ ಗುರುವಾರವಾ 25 ವರ್ಷದ ಯುವತಿ ಕವಿತಾ ಆನೆ ದಾಳಿಗೆ ಬಲಿಯಾಗಿದ್ದರು.
ಮಲೆನಾಡಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ, ಮೂಡಿಗೆರೆ-ಬೇಲೂರು ಗಡಿಯಲ್ಲಿ 25 ಆನೆಗಳು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿರುವ ಸಂಬಂಧ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನಾರ್ಥ ಬಾಳೆಹೊನ್ನೂರು-ಖಾಂಡ್ಯ ಸಂಪೂರ್ಣ ಬಂದ್ ಆಗಿದೆ, ಸ್ಥಳೀಯರು ಸ್ವಯಂಪ್ರೇರಿತವಾಗಿ ಬಾಳೆಹೊನ್ನೂರು ಬಂದ್ ಗೆ ಕರೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರು ಬಸ್ ಸ್ಟಾಂಡ್ ಸಮೀಪ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಕಂಡು ಹೆದರಿದ ವಿದ್ಯಾರ್ಥಿಗಳು ಪಕ್ಕದದಲ್ಲೇ ಇದ್ದ ಅಂಗಡಿಗೆ ಓಡಿ ಹೋಗಿ ರಕ್ಷಣೆ ಪಡೆದಿದ್ದಾರೆ. ಬಳಿಕ ಕಾಡಾನೆ ವಾಪಸ್ ಹೋಗಿದೆ.