Menu

ಆನೇಕಲ್‌ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ತಮಿಳುನಾಡು – ಕರ್ನಾಟಕ ಗಡಿ ಭಾಗದ ಆನೇಕಲ್‌ ಸಮೀಪ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಂಭೀರ ಗಾಯಗಳಾಗಿವೆ.

ಗ್ರಾಮದ ವೆಂಕಟೇಶ್ ಕಾಡಾನೆ ದಾಳಿಗೆ ಬಲಿಯಾದವರಉ. ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಅವರು ಸ್ಥಳದಲ್ಲೇ ಮೃತಪಟ್ಟರೆ, ಮಗ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ವಿಕಿತ್ಸೆ ಪಡೆಯುತ್ತಿದ್ದಾರೆ.

ನಾಡಿಗೆ ನುಗ್ಗುವ ಆನೆಗಳನ್ನು ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗನಹಳ್ಳಿ ಬಳಿ ರೈತನ ಮೃತದೇಹವನ್ನು ಮುಖ್ಯರಸ್ತೆಯಲ್ಲಿ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದರು. ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಸ್ಥಳಕ್ಕೆ ಬರಲೇಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಕಳೆದ ತಿಂಗಳು ಚಿಕ್ಕಮಗಳೂರಿನಲ್ಲಿ  ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ  ನಡೆದಿದೆ.  ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ  ದಾಳಿಗೆ ಬಲಿಯಾಗಿದ್ದರು.  ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿದ ಆನೆಯ ತುಳಿದು ಸಾಯಿಸಿತ್ತು.

ಕಳೆದ ಡಿಸೆಂಬರ್‌ನಲ್ಲಿ ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಪುಟ್ಟಮಾದೇಗೌಡ (48) ಬಲಿಯಾಗಿದ್ದರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿತ್ದೆತು.  ಬನ್ನೇರುಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಬಂದಿರುವ ಕಾಡಾನೆ ರಾತ್ರಿ ರೈತರ ಜಮೀನಿನಲ್ಲಿ ದಾಂಧಲೆ ನಡೆಸಿ ರಾಗಿ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿತ್ತು.

Related Posts

Leave a Reply

Your email address will not be published. Required fields are marked *