ದುಬೈನಿಂದ ಪ್ರಯಾಣಿಕನೊಬ್ಬ ಅಕ್ರಮವಾಗಿ 3.5 ಕೆಜಿ ಚಿನ್ನವನ್ನು ತಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸಲು ಸ್ಮಗ್ಲರ್ ಯತ್ನಿಸಿದ್ದರೂ ಭದ್ರತಾ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದಾನೆ.
ಆರೋಪಿಯು ತನ್ನ ಬಳಿ ಇದ್ದ 3.5 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆಂಬ ಭಯದಿಂದ ಟ್ರಾಲಿ ಬ್ಯಾಗ್‌ನಿಂದ ಪ್ರಯಾಣಿಕನ ಟ್ರಾಲಿ ಬ್ಯಾಗ್‌ಗೆ ಹಾಕಿಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಚಿನ್ನವನ್ನು ಇಟ್ಟಿದ್ದ ಟ್ರಾಲಿ ಬ್ಯಾಗ್ ತಳ್ಳಿಕೊಂಡು ಆಗಮಿಸುತ್ತಿದ್ದ ಪ್ರಯಾಣಿಕ ಯಾವುದೋ ಬ್ಯಾಗ್ ಜಾರಿ ಬಿದ್ದುದನ್ನು ಗಮನಿಸಿ ಅದರಲ್ಲಿ ತುಂಬಿದ ಚಿನ್ನದ ಬಿಸ್ಕೆಟ್‌ಗಳನ್ನು ಕಂಡು ಬೆಚ್ಚಿ ಬೀಳುತ್ತಾನೆ. ಕೂಡಲೇ ಆತ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾನೆ.
ಕಸ್ಟಮ್ಸ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ 3.5 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬಂದಿದ್ದ ಪ್ರಯಾಣಿಕರ ವಿವರಗಳನ್ನು ಪರಿಶೀಲಿಸುತ್ತಿದ್ದು, ಚಿನ್ನ ಬಿಟ್ಟು ಪರಾರಿಯಾಗಿರುವ ವ್ಯಕ್ತಿಯ ಪತ್ತೆಗಾಗಿ ತನಿಖೆ ಮುಂದುವರಿದಿದೆ.