ಬೆಂಗಳೂರಿನಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ ಕುಸಿದು ಮೃತಪಟ್ಟಿದ್ದಾರೆ. ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತರು.
ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್‌ಗೆ ಹೋಗಿದ್ದಾಗ ಹೃದಯಾಘಾತದಿಂದ ಸಂಭವಿಸಿ ಅಸು ನೀಗಿದ್ದಾರೆ. ಶನಿವಾರ ರಾತ್ರಿ ರೆಸಾರ್ಟ್‌ನಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದ ವೇಳೆ ಬಸವರಾಜ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೃದಯಾಘಾತದಿಂದ ಬಸವರಾಜ್ ಕೊನೆಯುಸಿರೆಳೆದಿದ್ದಾರೆ.
ಬಸವರಾಜ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಾಲ್ಕು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತದೇಹವನ್ನು ಬೆಂಗಳೂರಿನಿಂದ ಲಿಂಗಸುಗೂರಿನ ಸರ್ಜಾಪುರಕ್ಕೆ ಕಳಿಸಲಾಗಿದೆ.