ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಆಗಿರುವ ಮಾಸ್ತಪ್ಪ (65), ಪತ್ನಿ ರತ್ನಮ್ಮ (45) ಮತ್ತು ಮಗಳು ಲಕ್ಷ್ಮೀ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮಾಸ್ತಪ್ಪ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಮಂಡ್ಯದ ಯಲಿಯೂರು ಬಳಿ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತೊಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.