Menu

ರೈಲ್ವೆ ಪರೀಕ್ಷೆಯಲ್ಲಿ ಮಂಗಳ ಸೂತ್ರ ಬಿಕ್ಕಟ್ಟು ಪರಿಹಾರ: ಸಚಿವ ವಿ ಸೋಮಣ್ಣ

ಇಂದು ಏಪ್ರಿಲ್ ( 28) 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನ ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿ  ಗೊಂದಲ ನಿವಾರಿಸಿರುವುದಾಗಿ ರೈಲ್ವೆ ಖಾತೆಯ ರಾಜ್ಯ  ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ.

ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದು, ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು  ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *