Monday, September 28, 2026
Menu

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಳವು: ಮನೆ ಎದುರು ಕಸ ಗುಡಿಸುತ್ತಿದ್ದ ಮಹಿಳೆ ಸಾವು

ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ, ಆದರೆ ಮಹಿಳೆ ಕುಸಿದು ಬಿದ್ದು ಅಸು ನೀಗಿದ್ದಾರೆ.

ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುತ್ತಿರುವಾಗ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕ ನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Related Posts

Leave a Reply

Your email address will not be published. Required fields are marked *