Menu

ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು

ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ.

ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದವು. ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 23 ದಿನಗಳಿಂದ ಆತ ಚಿಕಿತ್ಸೆ ಪಡೆಯುತ್ತಿದ್ದ.

ಜನವರಿ 21ರಂದು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದರು. 10 ಜನರಿಗೆ ಗಾಯಗಳಾಗಿದ್ದವು. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related Posts

Leave a Reply

Your email address will not be published. Required fields are marked *