Menu

ಗೆಲುವಿನ ಅಂತರ: ಹೊಸದಾಗಿ ಅರ್ಜಿ ಸಲ್ಲಿಸಲು ಮಮತಾ ಬ್ಯಾನರ್ಜಿಗೆ ಸುಪ್ರೀಂ ಸೂಚನೆ

supreme court

ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಸಮಯದಲ್ಲಿ ಗೆಲುವಿನ ಅಂತರವು ಡಿಲಿಟ್‌ ಮಾಡಲಾಗಿರುವ ಮತಗಳಿಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಚುನಾವಣಾ ಆಯೋಗವು ಈ ಅರ್ಜಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಚನಾವಣೆಗೆ ಸಂಬಂಧಿಸಿದ ಅರ್ಜಿ. ಎಸ್‌ಐಆರ್‌ಗೆ ಸಂಬಂಧಿಸಿದ ವಿಷಯಗಳು ಮತ್ತು ಮತಗಳ ಸೇರ್ಪಡೆ ಅಥವಾ ಅಳಿಸುವಿಕೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದೆ.

ಇತ್ತೀಚೆಗೆ ನಡೆದ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಪಡೆದುಕೊಂಡಿದ್ದು ಟಿಎಂಸಿ 80 ಸ್ಥಾನಗಳನ್ನು ಗೆದ್ದಿದೆ.

Related Posts

Leave a Reply

Your email address will not be published. Required fields are marked *