9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ


ಗ್ವಾಲಿಯರ್ (ಮಧ್ಯಪ್ರದೇಶ) ಜನವರಿ 14 ಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಮಂಗಳವಾರ ರಾತ್ರಿ 8.30ರ ಸುಮಾರಿಗೆ ಹಾಲು ತರಲು ಬಾಲಕಿ ಅಂಗಡಿಗೆ ಹೋಗಿದ್ದಾರೆ. ಹಾಲು ಖರೀದಿಸಿ ಮನೆಗೆ ಬರುತ್ತಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಸಮೀಪದ ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆತ್ಮರಾಮ್ ಶರ್ಮಾ ತಿಳಿಸಿದ್ದಾರೆ.
ಬಾಲಕಿ 9ನೆ ತರಗತಿಯಲ್ಲಿ ಕಲಿಯುತ್ತಿದ್ದು, ಅತ್ಯಾಚಾರವೆಸಗಿದ ಆರೋಪಿಗಳಲ್ಲಿ ಓರ್ವ ಆಕೆಯ ಸಂಬಂಧಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಯುಎನ್ಐ ಎಎಚ್ 1148

Leave a Reply

Your email address will not be published. Required fields are marked *