ಅಮ್ರೋಹಾ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅತ್ರಾಸಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಪಟಾಕಿ ಕಾರ್ಖಾನೆಯನ್ನು ಹಾಪುರ್‌ಗೆ ಸೇರಿದ ಸೈಫ್-ಉರ್-ರೆಹಮಾನ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.
ರಜತ್‌ಪುರ ಪೊಲೀಸ್ ಠಾಣೆ ಪ್ರದೇಶದ ಅತ್ರಾಸಿ ಗ್ರಾಮದಲ್ಲಿ ಪರವಾನಗಿ ಪಡೆದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ತಕ್ಷಣ ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿತು. ಈ ಘಟನೆಯಲ್ಲಿ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 6 ಮಹಿಳೆಯರು ಗಾಯಗೊಂಡಿದ್ದಾರೆ” ಎಂದು ಅಮ್ರೋಹಾ ಎಸ್‌ಪಿ ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ.