ರಾಜ್ಯದಲ್ಲಿ ಸರ್ಕಾರಿ ಖಾಸಗಿ ಎಂಬ ವ್ಯತ್ಯಾವಿಲ್ಲದೆ ಆಸ್ಪತ್ರೆಗಳಲ್ಲಿ ಬಾಣಂತಿಯ ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಮುಂದುವರಿದಿದ್ದು, ಜನರಲ್ಲಿ ಆತಂಕವುಂಟಾಗಿದೆ.
ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಳೂರು ಗ್ರಾಮದ ಮಂಜುಳಾ (25) ಮೃತಪಟ್ಟಿರುವ ಬಾಣಂತಿಯಾಗಿದ್ದು, ಫೆ.10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಹೆರಿಗೆಯಾಗಿತ್ತು.
ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಕಾರಣಕ್ಕೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಅಸು ನೀಗಿದ್ದಾರೆ. ಒಂದು ವರ್ಷದ ಹಿಂದೆಯಷ್ಟೇ ಮಂಜುಳಾ ಅವರಿಗೆ ಮದುವೆಯಾಗಿತ್ತು.