ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.
ಕುದ್ದೂರು ಗ್ರಾಮದ ದೀಪಕ್ ಎಂಬವರ ಪತ್ನಿ ಸಿಂಧು (28) ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಬುಧವಾರ ಮಧ್ಯಾಹ್ನ ಆಸ್ಪತ್ರೆಗೆ ಬಂದಿದ್ದರು. ರಾತ್ರಿವರೆಗೂ ಚಿಕಿತ್ಸೆ ನೀಡಿದ ವೈದ್ಯರು ನಂತರ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.
ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮುಂದೆ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದರು. ಬಾಣಂತಿಯನ್ನು ಐಸಿಯುನಲ್ಲಿ ಇಟ್ಟು ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತರ ತಂದೆ, ತಾಯಿ ಆರೋಪಿಸಿದ್ದಾರೆ.