ಬೆಂಗಳೂರು: 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಪರೀಕ್ಷಾ ಭಯದಿಂದ ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಆಂಧ್ರಪ್ರದೇಶ ಮೂಲದ ಯಶವಂತಪುರ ಖಾಸಗಿ ಕಾಲೇಜಿನ 2ನೇ ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಮ್ಯ ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದು, ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.
ಆತ್ಮಹತ್ಯೆಗೂ ಮುನ್ನ ಸೌಮ್ಯ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಮ್ಯ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.