ನೂತನವಾಗಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.
ನಾಳೆಯಿಂದ (ಗುರುವಾರ) 3 ದಿನ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ ಎಂದರು.


