Menu

Suicide death- ಸಹಪಾಠಿಗಳ ಮಾನಸಿಕ ಕಿರುಕುಳ: ಡೆತ್‌ ನೋಟ್‌ ಬರೆದಿಟ್ಟು ಗುಳೇದಗುಡ್ಡ ವಿದ್ಯಾರ್ಥಿನಿ ಸುಸೈಡ್‌

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಕಾಲೇಜು ವಿದ್ಯಾರ್ಥಿನಿ ಅಂಜಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.

21 ವರ್ಷದ ಅಂಜಲಿ. ತಮ್ಮ ಸಾವಿಗೆ ಕಾರಣರಾದ ಮೂವರ ಹೆಸರನ್ನು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  ಅಂಜಲಿ ಬಿಎ ನಾಲ್ಕನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದರು.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಂಜಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಭ್ಯವಾಗಿರುವ ಡೆತ್ ನೋಟ್‌ನಲ್ಲಿ ಅಂಜಲಿ, ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್‌ ಮತ್ತು ಇನ್ನಿತರ ಸ್ನೇಹಿತರು. ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೈನಿಂಗ್‌ ಗುಡ್‌ ಬಾಯ್‌ ಎಂದು ಬರೆದಿದ್ದಾರೆ.

ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *