ನವದೆಹಲಿ: ಬಳ್ಳಾರಿ ಮತ್ತು ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ಟೆಂಡರ್ ಕರೆಯಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೆಗೆ ಉತ್ತರಿಸುತ್ತಾ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಉಡಾನ್ ಯೋಜನೆಯಡಿ 20 ಆಸನಗಳಿಗಿಂತ ಕಡಿಮೆ ಆಸನದ ವಿಮಾನಗಳ ನಿಲ್ದಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ
ಬಳ್ಳಾರಿ ಮತ್ತು ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣಗಳ ಆರಂಭಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆ ಕೋರಲಾಗಿದೆ. ಅಲ್ಲದೇ ಅವಶ್ಯಕ ಭೂಮಿಯ ಲಭ್ಯತೆ ಕುರಿತು ಖಚಿತಪಡಿಸುವ ಜೊತೆಗೆ ಉಚಿತವಾಗಿ ಭೂಮಿ ಒದಗಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.
ಈ ನಿಲ್ದಾಣದಲ್ಲಿ ಆರಂಭಿಕ ಹಂತದಲ್ಲಿ ಸಣ್ಣ ವಿಮಾನಗಳ ಕಾರ್ಯಾಚರಣೆ ಮಾಡಲಾಗುವುದು. ಆ ಭೂಮಿಯಲ್ಲಿ ಮುಂದೆ ನಿಲ್ದಾಣದ ವಿಸ್ತರಣೆಗೆ ಅವಕಾಶವೂ ಇರಬೇಕು. ಅಂತಹ ಜಾಗ ಗುರುತಿಸುವಂತೆ ಸೂಚಿಸಲಾಗಿದೆ. ರಾಯಚೂರು, ಕುಶಾಲನಗರ ಹಾಗೂ ಹಾಸನದಲ್ಲಿ ಏರ್‌ಸ್ಟ್ರಿಪ್‌ಗಳ ನಿರ್ಮಾಣಕ್ಕೆ ಯಾವುದೇ ಬಿಡ್ ಸ್ವೀಕಾರ ಆಗಿಲ್ಲ ಎಂದು ಸ್ಟಷ್ಟಪಡಿಸಿದ್ದಾರೆ.