Tuesday, September 01, 2026
Menu

ಹೆಬ್ಬಾಳದಲ್ಲಿ10 ಕೋ. ರೂ. ವೆಚ್ಚದ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಸಚಿವ ಬೈರತಿ ಶಂಕು ಸ್ಥಾಪನೆ

ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದ್ದು, ಕ್ಷೇತ್ರದ ಶಾಸಕ ಹಾಗೂ  ಸಾರಿಗೆ ಸಚಿವ ಬೈರತಿ ಸುರೇಶ್  ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ  ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಬ್ಬಾಳ ಕ್ಷೇತ್ರದಲ್ಲಿ 2018 ಕ್ಕಿಂತ ಮುನ್ನ  ಶಾಲೆ ಮಾತ್ರ ಇತ್ತು. ನಾನು ಶಾಸಕನಾದ ನಂತರ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಗುಣಮಟ್ಟದ ಶಿಕ್ಷಕರನ್ನು ಒದಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಮ್ಮಿ ಇಲ್ಲ. ಅವರಿಗಿಂತಲೂ ಹೆಚ್ಚು ಅರ್ಹತೆ ಮತ್ತು ಬುದ್ಧಿವಂತಿಕೆಯನ್ನು ಹೊಂದಿರುವ ಮಕ್ಕಳಿದ್ದಾರೆ ಎಂದು ಶ್ಲಾಘಿಸಿದರು.

ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ವ್ಯಾಸಂಗ ಮಾಡಿ ಶಿಕ್ಷಣ ನೀಡುವ ಶಿಕ್ಷಕರು ಮತ್ತು ಪೋಷಕರಿಗೆ ಒಳ್ಳೆಯ ಹೆಸರನ್ನು ತನ್ನಿ ಹಾಗೂ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Related Posts

Leave a Reply

Your email address will not be published. Required fields are marked *