Menu

ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ: ವಿದ್ಯಾರ್ಥಿ ಚಳವಳಿಗೆ ಗೆಲುವು

ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿದ್ಯಾರ್ಥಿ ಚಳವಳಿಗೆ ಪ್ರಧಾನ್‌ ರಾಜೀನಾಮೆ ಮೂಲಕ ಗೆಲುವಾಗಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಧ ಎಕ್ಸ್‌ ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿರುವ ಅವರು, ರಾಜೀನಾಮೆಗೆ ಕಾರಣವನ್ನು ತಿಳಿಸಿದ್ದಾರೆ.ಕಳೆದ 10 ದಿನಗಳ ಬೆಳವಣಿಗೆಗಳನ್ನು ನೋಡಿ ಮನಸ್ಸು ದುಃಖಿತವಾಗಿದೆ. ಇದು ನನಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ಭಾರತದ ಯುವಶಕ್ತಿಯೇ ಈ ದೇಶದ ನಿಜವಾದ ಶಕ್ತಿ ಎಂದು ಹೇಳಿದ್ದಾರೆ.

ಈ ಪ್ರತಿಭಟನೆಯಿಂದ ರಾಷ್ಟ್ರವಿರೋಧಿ ಶಕ್ತಿಗಳು ಪ್ರಯೋಜನ ಪಡೆಯದಂತೆ, ಭಾರತದ ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ಜಟಿಲತೆಗಳಲ್ಲಿ ಸಿಲುಕದಂತೆ ಸಮಯವನ್ನು ಓದಿಗೆ ಮೀಸಲಿಡಲು ಮತ್ತು ವೃತ್ತಿ ನಿರ್ಮಾಣದ ಮೇಲೆ ಗಮನ ಹರಿಸುವಂತಾಗಲು ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ಅವರಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.

ನೀಟ್‌ ಹಗರಣ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು. ಆದರೆ ಕೇಂದ್ರ ಸರ್ಕಾರ ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸರಣಿ ಕ್ರಮಗಳನ್ನು ಕೈಗೊಂಡಿದ್ದರೂ, ಸಚಿವರ ರಾಜೀನಾಮೆಯ ಬೇಡಿಕೆಯನ್ನು ತಳ್ಳಿಹಾಕಿತ್ತು.   ಪ್ರತಿಭಟನೆಯ ನೇತೃತ್ವ ವಹಿಸಿರುವ ಸಿಜೆಪಿ ಸರ್ಕಾರದೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದ್ದರೂ ಬೇಡಿಕೆಗಳಿಂದ ಹಿಂದೆ ಸರಿಯಲು  ನಿರಾಕರಿಸಿತ್ತು. ಈಗ ಸಚಿವ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *