ಬೆಳಗಾವಿ ಗ್ರಾಮೀಣದಲ್ಲಿ‌ ಸ್ನೇಹಕೂಟ ; ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯರನ್ನು ಸತ್ಕರಿಸಿದ ಸಚಿವ ರಮೇಶ್ ಜಾರಕಿಹೊಳಿ‌.

ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯರನ್ನು ಸತ್ಕರಿಸಿದ ಸಚಿವ ರಮೇಶ್ ಜಾರಕಿಹೊಳಿ‌.

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಆಯ್ಕೆಯಾದ ನೂತನ ಗ್ರಾಮ ಪಂಚಾಯತ್ ಸದಸ್ಯರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಅಭಿನಂದಿಸಿ ಸತ್ಕರಿಸಿದರು.

ಬೆಳಗಾವಿಯ ಜಾಂಬೋಟಿ ರಸ್ತೆಯಲ್ಲಿರುವ ಗಣೇಶ್ ಭಾಗ್ ತೋಟದಲ್ಲಿ ನಡೆದ ಸ್ನೇಹಕೂಟದಲ್ಲಿ ನೂತನ ಗ್ರಾಮ ಪಂಚಾಯತ್ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌ ಅವರು, ಗೋಕಾಕ್ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರಗಳೆರಡೂ ನನ್ನ ಎರಡು ಕಣ್ಣುಗಳಿದ್ದಂತೆ. ಮುಂದಿನ ಇನ್ನೆರಡು ವರ್ಷಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದ ಸಚಿವ ರಮೇಶ್ ಜಾರಕಿಹೊಳಿ‌, ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತ‌ ಪಡೆಯುವತ್ತ ಪಕ್ಷದ ಕಾರ್ಯಕರ್ತರು ಕೆಲಸ‌‌ ಮಾಡಬೇಕು ಎಂದರು.

Leave a Reply

Your email address will not be published. Required fields are marked *