Wednesday, January 07, 2026
Menu

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

belagavi news

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕರಾಗಿದ್ದು, ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಅವರ ಮೇಲೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದಾರೆ.‌

ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಮೃಣಾಲ್ ಹೆಬ್ಬಾಳ್ಕರ್ ದೌಡಾಯಿಸಿದ್ದಾರೆ.‌ ಇನ್ನು ಡಿಸಿಪಿ ನಾರಾಯಣ ಬರಮನಿ ಕೂಡ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಹಲ್ಲೆಗೆ ಹಣಕಾಸು ವ್ಯವಹಾರ ಕಾರಣ ಎಂಬುದು ಪ್ರಾಥಮಿಕ‌ ಮಾಹಿತಿಯಿಂದ ತಿಳಿದು ಬಂದಿದ್ದು, ನಿಖರ ಕಾರಣ ಪೊಲೀಸರ ತನಿಖೆಯಿಂದಲೇ ಗೊತ್ತಾಗಬೇಕಿದೆ.

Related Posts

Leave a Reply

Your email address will not be published. Required fields are marked *