Menu

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

sslc student

ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ಶಿವಮೊಗ್ಗ ಜಿಲ್ಲೆಯ ಶಿರಸಿಯ ಸರ್ಕಾರಿ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಅತ್ಯಮೂಲ್ಯವಾದದ್ದು. ಇಂತಹ ಸಾಧನೆಯಿಂದ ಭಾರತದ ದಿವ್ಯ ಪರಂಪರೆಗೆ ಮುನ್ನುಡಿ ಬರೆಯುವಂತರಾಗಲಿ. ಅವರೆಲ್ಲರಿಗೂ ನನ್ನ ಗೌರವ ಮತ್ತು ಅಭಿನಂದನೆಗಳು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ತಮ್ಮ ಜಿಲ್ಲೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಗೌರವಿಸಿ, ಶುಭ ಹಾರೈಸಿದ್ದಾರೆ.

ಸಚಿವರೊಂದಿಗೆ, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ ನಾಯ್ಕ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಆನಂದ ಕೊರವರ, ಶಿಕ್ಷಕ ಕೃಷ್ಣಶೆಟ್ಟಿ, ಶ್ರೀಧರ್ ಶೆಟ್ಟಿ ಹಾಗೂ ಇಲಾಖೆಯ ಅಧಿಕಾರಿಗಳು, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಹಾಜರಿದ್ದರು.

2024-25 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 8,42,173 ವಿದ್ಯಾರ್ಥಿಗಳಲ್ಲಿ 5,24,984 ಮಕ್ಕಳು ಉತ್ತೀರ್ಣರಾಗುವ ಮೂಲಕ ಶೇ.62.34 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.8 ರಷ್ಟು ಫಲಿತಾಂಶ ಹೆಚ್ಚಿದೆ.

ಹಾಗೆಯೇ, ಈ ಬಾರಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಗಳಲ್ಲಿ ಶೇ.62.7, ಅನುದಾನಿತ ಶಾಲೆಗಳಲ್ಲಿ ಶೇ.58.97ರಷ್ಟು ಮಕ್ಕಳು ತೇರ್ಗಡೆ ಹೊಂದಿದ್ದಾರೆ.

ಶಿವಮೊಗ್ಗ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದ್ದು ಶೇ.82.29 ರಷ್ಟು ಮಕ್ಕಳು ತೇರ್ಗಡೆ ಹೊಂದಿದ್ದಾರೆ. ಅದಲ್ಲದೆ, ಶೇ. 75.14ರಷ್ಟು ವಿದ್ಯಾರ್ಥಿಗಳು 60% ಅಂಕಗಳನ್ನು ಮೀರಿ ಪಡೆದಿರುವುದು ಗಮನಾರ್ಹ.

2024-25ರ ಪರೀಕ್ಷೆ -1 ರಲ್ಲಿ ಅಪೂರ್ಣ ಫಲಿತಾಂಶ ಪಡೆದಿದ್ದ ಶಾಲಾ ಅಭ್ಯರ್ಥಿಗಳಿಗೆ ಪರೀಕ್ಷೆ-2ಕ್ಕೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಆದರೆ ಖಾಸಗಿ ಅಭ್ಯರ್ಥಿಗಳು, ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಶುಲ್ಕ ಪಾವತಿಸಬೇಕು.

Related Posts

Leave a Reply

Your email address will not be published. Required fields are marked *