ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಉದ್ಘಾಟನೆ ನೆರವೇರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿಮಾತನಾಡಿದರು.
ನರೇಂದ್ರ ಮೋದಿ ಅವರ ನೇತೃತ್ವ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಇತರ ದೇಶದವರಿಗೂ ಮಾದರಿ ಸರ್ಕಾರ ಆಗಿದೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಕೆಲಸ ಸರಕಾರ ಮಾಡುತ್ತಿದೆ, ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು, ಈ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಉದ್ಯೋಗ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ, ಕೃಷಿ ಉತ್ಪನ್ನಗಳ ಮೌಲ್ಯವರ್ಧನಗಳ ಅನುಕೂಲ ಈ ಭಾಗದ ಜನರಿಗೆ ದೊರೆಯುತ್ತದೆ ಎಂದು ಹೇಳಿದರು.
ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾ ಅಧಿಕಾರಿ ನಿತೀಶ್ ಕೆ, ಕೇಂದ್ರದ ಅಧಿಕಾರಿಗಳಾದ ಎಂ.ನಾಗರಾಜು, ಶಿರಾಜ್ ಕೆ. ವಿ.,ಸಂಜೀವ್ ಬಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ, ಬಿಜೆಪಿ ಮುಖಂಡ ಕೆ.ಕರಿಯಪ್ಪ ಸೇರಿದಂತೆ ಇತರರು ಇದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರನ್ನು ಅನೇಕ ಪಕ್ಷದ ಮುಖಂಡರು, ಅಧಿಕಾರಿಗಳು ಸನ್ಮಾನಿಸಿದರು.