ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರತೀಯ ಸೇನಾ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ನಮ್ಮ ಸೇನೆ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನು ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು.ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಎಲ್ಲ ಕಡೆಯಿಂದ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಬೆಂಗಳೂರಿನ ಜಯನಗರದ 4ನೇ ಬ್ಲಾಕ್ನಲ್ಲಿನ ಗಣೇಶ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಸಚಿವರು ಪ್ರಾರ್ಥನೆ ಸಲ್ಲಿಸಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಗರದ ರಾಮ್ ಅಂಡ್ ಕೋ ಸರ್ಕ್ಲನಲ್ಲಿನ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿನ ಗಣೇಶ ದೇವಸ್ಥಾನದಲ್ಲಿ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.