Thursday, October 09, 2025
Menu

ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್‌ ಲಾಡ್‌

ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್   ಉದ್ಘಾಟಿಸಿದರು.

ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ ಕಾರ್ಮಿಕ ಭವನವನ್ನು ನಿರ್ಮಿಸಲಾಗಿದ್ದು, ಭವನವು ಮುಂದಿನ ದಿನಗಳಲ್ಲಿ ಕಾರ್ಮಿಕರ ಸಭೆ, ತರಬೇತಿ ಶಿಬಿರಗಳಿಗೆ ಉತ್ತಮ ವೇದಿಕೆಯಾಗಿ ಉಪಯೋಗವಾಗಲಿದೆ ಎಂದು ಸಚಿವರು ಹೇಳಿದರು.

ಕಾರ್ಮಿಕ ವರ್ಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ, ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಜಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *