ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು ಸಮೀಕ್ಷೆ ಮಾಡಿ, ಈ ಸಮೀಕ್ಷೆ ವೈಜ್ಞಾನಿಕವಾಗಿ ಮಾಡಿಲ್ಲ, ವರದಿ ಪಾರದರ್ಶಕ ಆಗಿಲ್ಲ. ಇದು ಜೇನುಗೂಡಿಗೆ ಕೈ ಹಾಕಿದಂತೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಾತಿ ಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ರಾಜಕೀಯವಾಗಿ ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ ಈ ಮಟ್ಟಕ್ಕೂ ಅವರು ಬಂದಿ ದ್ದಾರಾ ಅನ್ನೋ ನೋವು ಕಾಡುತ್ತದೆ ನನಗೆ ಎಂದು ಹೇಳಿದ್ದಾರೆ.
ಈ ವರದಿ ಜಾರಿ ಆದರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ. ವರದಿ ಜಾರಿಯಾದರೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಒಂಟಿಯಾಗಿ ಹೋಗ್ತಾರೆ. ಈ ವರದಿಯನ್ನು ಸಿದ್ದರಾಮಯ್ಯ ಅವರು ತಿರಸ್ಕರಿಸಬೇಕು. ಮತ್ತೊಂದು ಸಮೀಕ್ಷೆಯನ್ನು ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ ಸಿದ್ದರಾಮಯ್ಯಗೆ. ಈ ಸಮೀಕ್ಷೆ ವೈಜ್ಞಾ ನಿಕವಾಗಿ ಮಾಡಿಲ್ಲ, ವರದಿ ಪಾರದರ್ಶಕ ಆಗಿಲ್ಲ. ಇದೊಂದು ಜೇನುಗೂಡಿಗೆ ಕೈ ಹಾಕಿದಂತೆ, ನಿಮ್ಮ ಪಕ್ಷದವರೇ ಏನೇನೋ ಹಿಡಿದು ತಿವೀತಿದ್ದಾರೆ. ಈ ವರದಿ ಜಾರಿ ಆದ್ರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ. ವರದಿ ಜಾರಿಯಾದರೆ ಸಿದ್ದರಾಮಯ್ಯ ಒಂಟಿಯಾಗಿ ಹೋಗ್ತಾರೆ. ಆದ್ದರಿಂದ ಈ ವರದಿ ತಿರಸ್ಕರಿಸುವಂತೆ ವಿ. ಸೋಮಣ್ಣ ಮನವಿ ಮಾಡಿದ್ದಾರೆ.