ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಹಂಗಾಮಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಗಳಿಗೆ ತೆರಳಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿರುವವರ ವಿವರ ಹೀಗಿದೆ, ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ), ಡಾ. ಜಿ. ಪರಮೇಶ್ವರ್ (ಉಪ ಮುಖ್ಯಮಂತ್ರಿ ), ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್.


