ತುಮಕೂರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸಲು ಕಾರಣನಾದ ಆರೋಪದಡಿ ಮೇಲೆ ವಿನಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
15 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿ ತಾಯಿ ದೂರು ನೀಡಿದ್ದು, ಕುಣಿಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಗಳ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ ಎಂಟು ತಿಂಗಳ ಗರ್ಭಿಣಿ ಎಂಬುದು ಗೊತ್ತಾಯಿತು. ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆರಿಗೆಯಾಗಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.