ಶಿವಮೊಗ್ಗ ರಾಗಿಗುಡ್ಡ ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಹಾಗೂ ರೆಹಮತ್ ಉಲ್ಲಾ ಬಂಧಿತರು.
ಈ ಆರೋಪಿಗಳು ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಬಂಧಿತ ಅರೋಪಿಗಳನ್ನು ಸದ್ದಾಂ ಹಾಗೂ ರೆಹಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಗಳು ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದರು.
ಘಟನೆ ಸ್ಥಳಕ್ಕೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹಾಗೂ ಎಂಎಲ್‌ಸಿ ಧನಂಜಯ್ ಸರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಧನಂಜಯ್ ಸರ್ಜಿ, ದೇವಾಲಯದ ಶುದ್ಧೀಕರಣ ಆಗಬೇಕು. ದೇವಾಲಯ ನಿರ್ಮಾಣ ಆಗಬೇಕು. ಈ ಭಾಗದ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.