ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ರಾಜ್ಯ ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ ಹಿಂದೂಗಳಿಗೆ ಸವಾಲು ಹಾಕುತ್ತಿವೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಚಾಮರಾಜಪೇಟೆಯಲ್ಲಿ ಗೋಮಾತೆಯ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರ ತಾಲ್ಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು, ಗರ್ಭದಿಂದ ಕರು ತೆಗೆದು ಬಿಸಾಡಿ, ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ.
ತುಷ್ಟೀಕರಣ,… pic.twitter.com/LE2Lp31GIc
— R. Ashoka (@RAshokaBJP) January 20, 2025
ಸಿಎಂ ಸಿದ್ದರಾಮಯ್ಯನವರೇ, ಗೋವುಗಳ ಮೇಲೆ ಪದೇ ಪದೆ ನಡೆಯುತ್ತಿರುವ ಈ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೆ ಇದ್ದಂತಿದೆ. ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ ಎಂದು ಹೇಳಿದ್ದಾರೆ.
ಕೃಷ್ಣಾಚಾರಿ ಎಂಬವರಿಗೆ ಸೇರಿದ ಗೋವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ದಿನಕರ್ ಶೆಟ್ಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ರಾಮುಲ್ಲ ಖಾನ್ ಆಗಿದ್ದಾರೆ. ಗೃಹ ಇಲಾಖೆ ನಾಚಿಕೆಗೇಡಿಯಾಗಿದೆ. ಹಿಂದೂಗಳ ಸಂಸ್ಕೃತಿಗೆ ಪದೇ ಪದೆ ಧಕ್ಕೆ ತರುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಹಲವು ನಿಗಮಗಳಿಗೆ ಬಿಡಿಗಾಸೂ ಇಲ್ಲ, ಕೆಲವು ನಿಗಮಗಳಿಗೆ ಬರೀ ಪುಡಿಗಾಸು
ಪರಿಶಿಷ್ಟರು, ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕೆ ಸ್ಥಾಪಿಸಲಾಗಿರುವ ಹಲವು ನಿಗಮ ಮಂಡಳಿಗಳಿಗೆ ಬಿಡಿಗಾಸೂ ಅನುದಾನ ಇಲ್ಲದೆ, ಕೆಲವು ನಿಗಮಗಳಿಗೆ ಪುಡಿಗಾಸು ಬಿಡುಗಡೆ ಮಾಡಿರುವ ಸರ್ಕಾರ, ನಾಡಿನ ಜನತೆಗೆ ದ್ರೋಹ ಬಗೆದಿದೆ. ಸ್ವಾಮಿ ಸಿಎಂ ಅವರೇ, ಇದೇನಾ ನಿಮ್ಮ ಸಾಮಾಜಿಕ ನ್ಯಾಯ, ಇದೇನಾ ಬಡವರು, ಪರಿಶಿಷ್ಟರು, ಹಿಂದುಳಿದವರ ಬಗ್ಗೆ ತಮಗಿರುವ ಕಾಳಜಿ, ಇದೇನಾ ಗಾಂಧಿ ಭಾರತ ನಿರ್ಮಿಸುವ ಪರಿ ಎಂದು ಪ್ರಶ್ನಿಸಿದ್ದಾರೆ.