Menu

ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ.

ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ಇಬ್ಬರೂ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕಾಗಿ ಈ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *