ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದರು.
ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ ಎಂದು ಅವರು ಹರಿಹಾಯ್ದರು.
ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.


