Saturday, December 27, 2025
Menu

ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ

siddaramaiah

ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದುಇದನ್ನು ಖಂಡಿಸಿ ದೇಶಾದ್ಯಂತ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯದ ರಾಜಕೀಯ ಹಾಗೂ ಯಾವುದೇ ವಿಷಯಗಳ ಕುರಿತು ಚರ್ಚೆ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ

ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

Related Posts

Leave a Reply

Your email address will not be published. Required fields are marked *