Menu

ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್‌ ಅಶೋಕ್‌

ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ಈಗ  ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಆರ್‌ ಅಶೋಕ್‌, ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ  ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವರಾದ  ಸತೀಶ್‌ ಜಾರಕಿಹೊಳಿ ಮತ್ತು ಸಿ ಮಹದೇವಪ್ಪ ಅವರೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಪರಮೇಶ್ವರ್‌ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ್ಗೆ ಬಹಿರಂಗವಾಗಿ ದನಿ ಎತ್ತಿರುವ ಸಚಿವರೆಲ್ಲರೂ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವವರು ಎನ್ನುವುದು ಕಾಕತಾಳೀಯವೋ ಅಥವಾ ಇದರ ಹಿಂದೆ ರಾಜಕೀಯ ಷಡ್ಯಂತ್ರವೇನಾದರೂ ಇದೆಯೋ? ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ ಎಂದು ಬರೆದುಕೊಂಡಿದ್ದಾರೆ.

 

 

Related Posts

Leave a Reply

Your email address will not be published. Required fields are marked *