Menu

ಜುಲೈ 21ರಿಂದ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ ಜುಲೈ 21ರಿಂದ ಮುಂಗಾರು ಅಧಿವೇಶನ ನಡೆಸುವುದಾಗಿ ಘೋಷಿಸಿದೆ.

ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಬುಧವಾರ ಈ ವಿಷಯ ತಿಳಿಸಿದ್ದು, ಜುಲೈ 21ರಿಂದ ಆಗಸ್ಟ್ 12ರವರೆಗೆ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ಮುಂಗಾರು ಅಧಿವೇಶನ ದಿನಾಂಕ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

Related Posts

Leave a Reply

Your email address will not be published. Required fields are marked *