Menu

ಜೂನ್ 11ರಿಂದ ಮುಂಗಾರು ಮತ್ತೆ ಚುರುಕು: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂನ್ 11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್11ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

Related Posts

Leave a Reply

Your email address will not be published. Required fields are marked *