ಮಂಗಳೂರು: ದೇಶವನ್ನೇ ಬೆಚ್ಚಿಬೀಳಿಸುವ ಕೋಲ್ಕತಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದ ಘಟನೆ ಮಾದರಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ.
ವಿದ್ಯಾರ್ಥಿನಿ ಮೇಲೆ ಮೂಡಬಿದಿರೆ ಕಾಲೇಜಿನ ಉಪನ್ಯಾಸಕರು ಹಾಗೂ ಅವರ ಗೆಳೆಯರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ನಡೆದಿದೆ.
ಮೂಡಬಿದಿರೆ ಕಾಲೇಜಿನ ಬಯೋಲಾಜಿ ಮತ್ತು ಫಿಜಿಕ್ಸ್ ಉಪನ್ಯಾಸಕರು ಹಾಗೂ ಅವರ ಗೆಳೆಯರು ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ.
ನೊಂದ ವಿದ್ಯಾರ್ಥೀನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಮಹಿಳಾ ಆಯೋಗದ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫಿಜಿಕ್ಸ್ ಉಪನ್ಯಾಸಕ ನರೇಂದ್ರ, ಬಯೋಲಾಜಿ ಉಪನ್ಯಾಸಕ ಸಂದೀಪ್ ಹಾಗೂ ಗೆಳೆಯ ಅನೂಪ್ ನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.
ನೋಟ್ ಬುಕ್ ನೀಡುವ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹತ್ತಿರವಾದ ನರೇಂದ್ರ ವಿದ್ಯಾರ್ಥಿನಿಗೆ ನೋಟ್ ಬುಕ್ ನೀಡುವ ನೆಪದಲ್ಲಿ ಮಾರತ್ ಹಳ್ಳಿಯ ಗೆಳೆಯನ ರೂಮ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ವಿಷಯ ತಿಳಿದ ಅನೂಪ್ ಕೂಡ ವಿದ್ಯಾರ್ಥಿನಿ ಬಳಿ ಹೋಗಿ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಈ ವಿಚಾರ ಯಾರಿಗೂ ತಿಳಿಸದಂತೆ ನರೇಂದ್ರ ಬೆದರಿಕೆ ಹಾಕಿದ್ದಾನೆ. ಕೆಲ ದಿನಗಳ ಬಳಿಕ ಸಂದೀಪ್ ಅದೇ ರೂಮ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಕ್ಕೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದಾಗ ನರೇಂದ್ರ ಜೊತೆಗಿರುವ ಫೋಟೊ, ವೀಡಿಯೊ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.