ವಿಜಯನಗರದ ಹೊಸಕೋಟೆ ತಾಲೂಕಿನಲ್ಲಿರುವ ಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಮತ್ತು ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ.
ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ಬಂದಿದ್ದ ಯಾಸ್ಮೀನ್(13) ಹಾಗೂ ತಾಯಿ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾದವರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ಈ ದುರಂತ ಸಂಭವಿಸಿದೆ.
ಕಾಲುಜಾರಿ ನದಿಗೆ ಬಿದ್ದು ನಾಪತ್ತೆಯಾಗಿರುವ ಇವರಿಗಾಗಿ ಹಂಪಿ ಪ್ರವಾಸಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ, ಶೋಧ ಕಾರ್ಯ ಮುಂದುವರಿಸಿದ್ದಾರೆ.


