ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಜಯಲಕ್ಷ್ಮಿಯ ಗಂಡ ರಮೇಶ್ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ತಂಗಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ವಿಜಯಲಕ್ಷ್ಮಿ ಮತ್ತು ರಮೇಶ್ ಮೂಲತ: ರಾಯಚೂರಿನ ಮಸ್ಕಿಯವರು. ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.