Wednesday, February 04, 2026
Menu

ಬೆಂಗಳೂರು-ಪುಣೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಸಂಸದ ಜೋಶಿ ಮನವಿ

ಬೆಂಗಳೂರು ಮತ್ತು ಪುಣೆ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಅನುಕೂಲವಾಗುತ್ತದೆ. ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಈ ಹೊಸ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. ಜೋಶಿ ಅವರ ಮನವಿಗೆ ರೈಲ್ವೆ ಸಚಿವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಬೆಂಗಳೂರು-ಚೆನ್ನೈ ಹಾಗೂ ಬೆಂಗಳೂರು- ಹೈದರಾಬಾದ್‌ ಹೈಸ್ಪೀಡ್ ರೈಲು ಕಾರಿಡಾರ್‌ಗಳನ್ನು ಪ್ರಕಟಿಸಲಾಗಿದ್ದು, ಅವುಗಳಿಂದ ರಾಜ್ಯಕ್ಕೆ ಹೆಚ್ಚಿನ ಪ್ರಯೋಜನ ಇಲ್ಲವೆಂದೇ ವಿಶ್ಲೇಷಿಸಲಾಗುತ್ತಿದೆ. ಬೆಂಗಳೂರು-ಪುಣೆ ಮಧ್ಯೆ ಈ ಸಂಪರ್ಕ ಆದಲ್ಲಿ ಕರ್ನಾಟಕಕ್ಕೆ ಬಹಳಷ್ಟು ಕೊಡುಗೆ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

Related Posts

Leave a Reply

Your email address will not be published. Required fields are marked *