ಚೆನ್ನೈ: ನಾಯಕ ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡು ಐಪಿಎಲ್ ಟಿ-20 ಟೂರ್ನಿಯಿಂದ ಹೊರಬಿದ್ದಿದ್ದು, 5 ಬಾರಿ ಪ್ರಶಸ್ತಿ ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕನಾಗಿ ಮರಳಿದ್ದಾರೆ.
ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀವನ್ ಫ್ಲೆಮಿಂಗ್, ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡಿದ್ದು, ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದರಿಂದ ಧೋನಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ಧಾರೆ ಎಂದರು.
ಶುಕ್ರವಾರ ಚೆನ್ನೈನಲ್ಲಿ ನಡೆಯಲಿರುವ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ನಾಯಕನಾಗಿ ಮರಳಲಿದ್ದಾರೆ. ಅಭ್ಯಾಸದ ವೇಳೆ ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡಿದ್ದು, ಏರ್ ಲೈನ್ ಫ್ರಾಕ್ಚರ್ ಆಗಿದೆ. ಇದರಿಂದ ಐಪಿಎಲ್ ಟಿ-20 ಟೂರ್ನಿಯ ಮುಂದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಪ್ರಸಕ್ತ ಸಾಲಿನ ಮುಂದಿನ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಫ್ಲೆಮಿಂಗ್ ವಿವರಿಸಿದ್ದಾರೆ.