ಪರಿಷತ್ ಚುನಾವಣೆ ; 1224 ಕೋಟಿಯ ಒಡೆಯ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್‌

ಬೆಂಗಳೂರು(ಜೂ.19): ವಿಧಾನಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿರುವವರ ಪೈಕಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಂ.ಟಿ.ಬಿ.ನಾಗರಾಜ್‌ ಅತಿ ಶ್ರೀಮಂತರಾಗಿದ್ದು, 1224 ಕೋಟಿ ರು. ಗಿಂತ ಹೆಚ್ಚು ಆಸ್ತಿಯ ಒಡೆಯರಾಗಿದ್ದಾರೆ. 2019ರ ವಿಧಾನಸಭೆ ಉಪ ಚುನಾವಣೆಯಲ್ಲಿ ಇವರು ಸುಮಾರು 1200 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದರು. ಈಗ ಆ ಆಸ್ತಿಯಲ್ಲಿ ಕೊಂಚ ಏರಿಕೆಯಾಗಿದೆ.

 

ಲಕ್ಷಾಂತರ ರು. ಮೌಲ್ಯದ ಡೈಮೆಂಡ್‌, ಪ್ಲಾಟಿನಂ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಹೊಂದಿರುವುದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಮಾಹಿತಿ ನೀಡಿದ್ದಾರೆ. ನಾಗರಾಜ್‌ ಅವರ ಹೆಸರಲ್ಲಿ 884 ಕೋಟಿ ರು. ಗಿಂತ ಹೆಚ್ಚು ಆಸ್ತಿ ಇದ್ದು, ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರು.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *